ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 19 ನೇ ವಾರ್ಷಿಕೋತ್ಸವದ ಅಂಗವಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಮಾರ್ಗದರ್ಶನದಲ್ಲಿ ಚುಟುಕು ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಇದರ ಸಹಯೋಗದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ ಸಹಕಾರದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸೆ.29 ರಂದು ರವಿವಾರ ಕಾಸರಗೋಡು ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕಾಸರಗೋಡು ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಚುಟುಕು ವಾಚಿಸಲು ಇಚ್ಛಿಸುವವರು ತಮ್ಮ ಸ್ವರಚಿತ ನಾಲ್ಕು ಸಾಲಿನ ಮೂರು ಚುಟುಕುಗಳನ್ನು ಬರೆದು, ತಮ್ಮ ಹೆಸರು, ವಿಳಾಸ, ಚುಟುಕು ಸ್ವಪರಿಚಯ, ಮೊಬೈಲ್ ಸಂಖ್ಯೆಯೊಂದಿಗೆ ಆ.30 ರ ಮುಂಚಿತವಾಗಿ ಅಂಚೆ ಮೂಲಕ ಕಳುಹಿಸಬೇಕು.
ಸಮ್ಮೇಳನದಲ್ಲಿ ಚುಟುಕು ಕವಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು. ಆಯ್ಕೆಯಾದ 50 ಮಂದಿ ಚುಟುಕು ಕವಿಗಳಿಗೆ ಅಂಚೆ ಪತ್ರದ ಮೂಲಕ ತಿಳಿಸಲಾಗುವುದು. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಚುಟುಕು ಕವಿಗಳಿಗೆ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಭಾಗವಹಿಸುವ ಅವಕಾಶ ನೀಡಲಾಗುವುದು.
ಸಂಪರ್ಕ ವಿಳಾಸ : ಶಿವರಾಮ ಕಾಸರಗೋಡು, ಅಧ್ಯಕ್ಷರು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕನ್ನಡ ಗ್ರಾಮ, ಜೆ.ಪಿ.ಕಾಲನಿ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು, ಮೊಬೈಲ್ - 9448572016 ಈ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬಹುದು.


