ಮುಂಬೈ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಸಿಎಂ ಅಜಿತ್ ಪವಾರ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.
1,000 ಕೋಟಿ ರೂಪಾಯಿ ಹಗರಣದಲ್ಲಿ 70 ಜನರ ವಿರುದ್ಧ 5 ದಿನಗಳಲ್ಲಿ ಎಫ್ ಐ ಆರ್ ದಾಖಲಿಸಲು ನ್ಯಾ.ಎಸ್ ಸಿ ಧರ್ಮಾಧಿಕಾರಿ ಹಾಗೂ ನ್ಯಾ. ಎಸ್ ಕೆ ಶಿಂಧೆ ಅವರಿದ್ದ ವಿಭಾಗೀಯ ಪೀಠ.
ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಾಧಾರಗಳಿದ್ದು, ಆರ್ಥಿಕ ಅಪರಾಧಗಳ ವಿಭಾಗಕ್ಕೆ ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಕೋರ್ಟ್ ಹೇಳಿದೆ. ಶರದ್ ಪವಾರ್, ಮಾಜಿ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿಗಳು ಹಾಗೂ ಸರ್ಕಾರಿ, ಬ್ಯಾಂಕ್ ಅಧಿಕಾರಿಗಳು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಎಂ ಅರೋರಾ ಆರೋಪಿಸಿದ್ದರು.


