ಕಾಸರಗೋಡು : ಕನ್ನಡ ಜಾಗೃತಿ ಸಮಿತಿ ನೇತೃತ್ವದಲ್ಲಿ ಕೋಟೆಕಣಿಯ ಕಾರ್ಯಾಲಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕನ್ನಡ ಹೋರಾಟ ಸಮಿತಿ ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್ ಅವರು ಧ್ವಜಾರೋಹಣಗೈದು ಮಾತನಾಡಿದರು. ಇದೇ ಸಂದರ್ಭದಲ್ಲಿ ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು, ಉದ್ಯಮಿ ರಾಮ್‍ಪ್ರಸಾದ್, ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ, ಹರಿಶ್ಚಂದ್ರ ಸೂರ್ಲು, ಸೀತಮ್ಮ ಪುರುಷ ನಾಯಕ ಸ್ಮಾರಕ ಗ್ರಂಥಾಲಯದ ಸ್ಥಾಪಕ ವಾಮನ ರಾವ್ ಬೇಕಲ್ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಕಾಸರಗೋಡು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕ ಶ್ರೀಕಾಂತ್ ಕಾಸರಗೋಡು ವಂದಿಸಿದರು.


