ಉಪ್ಪಳ: ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ ಅ.26, 28, 29 ಮತ್ತು 30ರಂದು ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆ. ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾಗತ ಸಮಿತಿ ರೂಪೀಕರಣ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲಾಯಿತು.
ವಿವಿಧ ಅಧ್ಯಾಪಕ ಸಂಘಟನೆಗಳ ಪ್ರತಿನಿಧಿಗಳು, ಶಾಲೆಗಳ ಮುಖ್ಯೋಪಾಧ್ಯಾಯರು, ಸಂಚಾಲಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ರಕ್ಷಕ ಶಿಕ್ಷಕ ಸಂಘದ ಪ್ರತಿನಿಧಿಗಳು, ಹಳೆವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಲೋತ್ಸವದ ವಿವಿಧ ಉಪಸಮಿತಿಗಳನ್ನು ರೂಪಿಸಲಾಯಿತು. ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ ಸ್ವಾಗತಿಸಿ, ಅಶ್ರಫ್ ಮತ್ರ್ಯ ವಂದಿಸಿದರು. ಕೃಷ್ಣಮೂರ್ತಿ ಎಂ.ಎಸ್. ನಿರೂಪಿಸಿದರು. ಶಶಿಕಲ ಕೆ ಸಹಕರಿಸಿದರು.


