ಮಂಜೇಶ್ವರ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಘಟಕದ ಮಹಾಸಭೆ ನಾಳೆ (ಸೆ.21) ಎಸ್. ಎ. ಟಿ ಶಾಲೆ ಮಂಜೇಶ್ವರದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಮಂಜೇಶ್ವರ ಉಪಜಿಲ್ಲಾ ಸಮಿತಿಯ ಅಧ್ಯಕ್ಷೆ ಶಶಿಕಲಾ.ಕೆ. ಧ್ವಜಾರೋಹಣಗೈಯುವ ಮೂಲಕ ಚಾಲನೆಗೈಯುವರು. ಬಳಿಕ ಪ್ರತಿನಿಧಿ ಸಮ್ಮೇಳನ ನಡೆಯಲಿದೆ. ಪ್ರತಿನಿಧಿ ಸಮ್ಮೇಳನದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ಸಮಿತಿಯ ಅಧ್ಯಕ್ಷೆ ಶಶಿಕಲಾ ಕೆ ವಹಿಸಲಿರುವರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ರವೀಂದ್ರನಾಥ ಕೆ.ಆರ್, ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಿ. ಬಿ, ಮಂಜೇಶ್ವರ ಉಪಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶಿವರಾಮ ಭಟ್ ಹಾಗೂ ಸುನೀತಾ ಎ ಉಪಸ್ಥಿತರಿರುವರು. ವಾರ್ಷಿಕ ವರದಿಯನ್ನು ಮಂಜೇಶ್ವರ ಉಪಜಿಲ್ಲಾ ಸಮಿತಿಯ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ, ಲೆಕ್ಕ ಪತ್ರವನ್ನು ಮಂಜೇಶ್ವರ ಉಪಜಿಲ್ಲಾ ಸಮಿತಿಯ ಕೋಶಾಧಿಕಾರಿ ನಯನಪ್ರಸಾದ್ ಎಚ್. ಟಿ ಮಂಡಿಸಲಿರುವರು.
ಬಳಿಕ ನಡೆಯುವ ಉಪಜಿಲ್ಲಾ ಸಮ್ಮೇಳನದ ಉದ್ಘಾಟನೆಯನ್ನು ನಿವೃತ್ತ ಪ್ರಾಧ್ಯಾಪಕ ಹಾಗೂ ಅಂಕಣ ಬರಹಗಾರ ರಾಧಾಕೃಷ್ಣ ಕಲ್ಚಾರ್ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ಸಮಿತಿಯ ಅಧ್ಯಕ್ಷೆ ಶಶಿಕಲಾ ಕೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್ ಯನ್, ಮಂಜೇಶ್ವರ ಉಪಜಿಲ್ಲಾ ಸಹಾಯಕ ವಿದ್ಯಾಧಿಕಾರಿ ದಿನೇಶ್ ವಿ, ಮಂಜೇಶ್ವರ ಕ್ಷೇತ್ರ ನಿರೂಪಣಾಧಿಕಾರಿ ವಿಜಯ ಕುಮಾರ್ ಪಿ, ಎಸ್. ಎ. ಟಿ ಶಾಲಾ ಪ್ರಬಂಧಕ ಎಂ. ಕೃಷ್ಣ ಭಟ್ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ರವೀಂದ್ರನಾಥ ಕೆ. ಆರ್, ಎಸ್. ಎ. ಟಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಮುರಳಿ ಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ತೇಜೇಸ್ ಕಿರಣ್ ಉಪಸ್ಥಿತರಿರುವರು.ಈ ಸಂದರ್ಭ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿರುವುದು.


