ಕುಂಬಳೆ: ಕುಂಬಳೆ ಭಾಸ್ಕರ ನಗರದ ನವೋದಯ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ 7ನೇ ವರ್ಷದ ಓಣಂ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಸಮಾರಂಭವನ್ನು ಕುಂಬಳೆ ಪೋಲೀಸ್ ಠಾಣಾಧಿಕಾರಿ ರಾಜೀವನ್ ದೀಪ ಬೆಳಗಿಸಿ ಉದ್ಘಾಟಿಸಿ ಸಾಮರಸ್ಯ-ಸಹಭಾಳ್ವೆಯ ಹಿನ್ನೆಲೆಯ ಓಣಂ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಲಾರತ್ನ ಶಂ.ನಾ.ಅಡಿಗ ಕುಂಬಳೆ ಅವರು ಓಣಂ ಹಬ್ಬದ ಪೌರಾಣಿಕ ಹಿನ್ನೆಲೆಯ ಬಗ್ಗೆ ತಿಳಿಸಿದರು. ಕುಂಬಳೆ ಗ್ರಾ.ಪಂ.ಉಪಾಧ್ಯಕ್ಷೆ ಗೀತಾ ಎಲ್.ಶೆಟ್ಟಿ ಉಪಸ್ಥಿತರಿದ್ದು ಶುಭಹಾರೈಸಿದರು. ಕಾರ್ಯದರ್ಶಿ ಸಂದೀಪ್ ಕ್ರಾಸ್ತಾ ಉಪಸ್ಥಿತರಿದ್ದರು. ನವೋದಯ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ರಂಜಿತ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಶಿಕ್ಷಕಿ ಶೋಭಾ ಸ್ವಾಗತಿಸಿ, ಮನೋಜ್ ಕುಮಾರ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.


