HEALTH TIPS

ತುಳು ಚಿತ್ರ 'ಗಿರಿಗಿಟ್' ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾ ಜ್ಞೆ!

         
       ಮಂಗಳೂರು:  ದಕ್ಷಿಣ ಕನ್ನಡ ಹಾಗೂ ಉಡುಪಿ, ಕಾಸರಗೋಡು ಜಿಲ್ಲೆಯಲ್ಲಿ ಕಳೆದ ಮೂರು ವಾರಗಳಿಂದ ಯಶಸ್ವಿ ಪ್ರದರ್ಶನ ಕಾಣುತ್ತಿರುವ ತುಳು ಹಾಸ್ಯಮಯ “ಗಿರ್‍ಗಿಟ್” ಚಿತ್ರಕ್ಕೆ ಮಂಗಳೂರು ನ್ಯಾಯಾಲಯ ಗುರುವಾರ ತಡೆಯಾ ಜ್ಞೆ  ನೀಡಿದ ಅಚ್ಚರಿಯ ಬೆಳವಣಿಗೆ ನಡೆದಿದೆ.
       ಚಿತ್ರದಲ್ಲಿನ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟ ಅರವಿಂದ ಬೋಳಾರ್ ವಕೀಲರ ಪಾತ್ರ ನಿರ್ವಹಿಸಿದ್ದು, ಅದರಲ್ಲಿ ಐಪಿಸಿ ಸೆಕ್ಷನ್, ನ್ಯಾಯಧೀಶರನ್ನು ಹಾಗೂ ನ್ಯಾಯಾಲಯವನ್ನು ಅಣಕಿಸಿದ ಮತ್ತು ವಕೀಲರ ವೃತ್ತಿಯನ್ನು ಹಾಸ್ಯಮಯವಾಗಿ ತೋರಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ವಕೀಲರ ಸಂಘ ನ್ಯಾಯಾಲಯ ಮೆಟ್ಟಿಲೇರಿತ್ತು.
     ಈ ಕುರಿತು ವಾದ ಆಲಿಸಿದ ಮಂಗಳೂರು ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್, ತಕ್ಷಣದಿಂದ ಚಿತ್ರದ ಪ್ರದರ್ಶನಕ್ಕೆ ತಡೆಯಾ ಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ.  ಈ ಕುರಿತಂತೆ ಮಾತನಾಡಿರುವ ನಿರ್ದೇಶಕ, ನಟ ರೂಪೇಶ್ ನ್ಯಾಯಾಲಯದ ಆದೇಶದಿಂದ ಬೇಸರವಾಗಿದೆ. ನಾವು ಅಪರಾಧ ಮಾಡಿಲ್ಲ. ವಕೀಲರೊಬ್ಬರ ಬೇಜವಾಬ್ದಾರಿಯನ್ನು ತಿಳಿಹಾಸ್ಯದ ಮೂಲಕ ತೋರಿಸುವ ಯತ್ನ ಮಾಡಿದ್ದೇವೆ. ಸೆನ್ಸಾರ್ ಮಂಡಳಿ ಸಹ ಚಿತ್ರಕ್ಕೆ 'ಯು' ಪ್ರಮಾಣಪತ್ರ ನೀಡಿದೆ ಎಂದಿದ್ದಾರೆ.
      ಇದೀಗ ತುಳು  ಚಿತ್ರಕ್ಕೆ ತಡೆಯಾ ಜ್ಞೆ  ನೀಡಿರುವ ವಿಚಾರ ಆಘಾತಕಾರಿಯಾಗಿದ್ದು ಚಿತ್ರದ ಒಂದು ದೃಶ್ಯದಲ್ಲಿ ವಕೀಲರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎನ್ನುವುದನ್ನೇ ಕಾರಣವಾಗಿಟ್ಟು ಇಡೀ ಚಿತ್ರ ಪ್ರದರ್ಶನ ತಡೆಯಾ ಜ್ಞೆ  ತರುವುದು ಒಳಿತಲ್ಲ. ತಡೆಯಾ ಜ್ಞೆ  ಹಿಂಪಡೆಯಬೇಕು ಎಂದು ತುಳು ಕಲಾವಿದರ ಒಕ್ಕೂಟ ಮನವಿ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries