ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ಓಣಂ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಸಮರಸತಾ ಹಬ್ಬವಾಗಿ ಆಚರಿಸಲಾಯಿತು.
ಮನೋರಂಜನಾ ಕಾರ್ಯಕ್ರಮದ ಅಂಗವಾಗಿ ಪುಟಾಣಿ ಮಕ್ಕಳ ಶ್ರೀಕೃಷ್ಣ ವೇಷ ಪ್ರದರ್ಶನ ನಡೆಯಿತು. ಮಕ್ಕಳಿಗೆ ಹೂರಂಗೋಲಿ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಶಾಸ್ತ್ರೀಯವಾದ ಓಣಂ ಔತಣವನ್ನು ನೀಡಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಶ್ರೀಕೃಷ್ಣ ವೇಷ ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಮುಖ್ಯ ಶಿಕ್ಷಕ ವೇಣುಗೋಪಾಲನ್ ನಾಯರ್ ವಂದಿಸಿದರು.


