ಮಂಜೇಶ್ವರ: ಭಾರತದ ರಾಷ್ಟ್ರಪತಿಗಳಾಗಿದ್ದ ಡಾ.ಸರ್ವಪಲ್ಲಿ ರಾಧಾ ಕೃಷ್ಣನ್ ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ, ನಿಷ್ಟೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ವರ್ಷಗಳ ಕಾಲ ಸೇವೆಗೈದಿರುವ ಭಾರತ ಕಂಡ ಅಗ್ರಗಣ್ಯ ಶಿಕ್ಷಕರಾಗಿದ್ದಾರೆ. ಅವರ ಜನ್ಮ ದಿನದಂಗವಾಗಿ ನಡೆಸಲ್ಪಡುವ ಕಾಸರಗೋಡು ಜಿಲ್ಲಾ ಮಟ್ಟದ ಅಧ್ಯಾಪಕರ ದಿನಾಚಣೆಯನ್ನು ಮಂಜೇಶ್ವರದ ಎಸ್ ಎ ಟಿ ಶಾಲೆಯಲ್ಲಿ ಗುರುವಾರ ಆಚರಿಸಲಾಯಿತು.
ಮಂಜೇಶ್ವರ ಗ್ರಾ. ಪಂ. ಉಪಾಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಎನ್ ಎ ನೆಲ್ಲಿಕುನ್ನು ಉದ್ಘಾಟಿಸಿದರು. ಗುರುವಂದನೆ ಸ್ವೀಕಾರದಂಗವಾಗಿ ಬ್ಲಾಕ್ ಪಂ. ಉಪಾಧ್ಯಕ್ಷೆ ಮಮತ ದಿವಾಕರ್ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಿ ಬಹುಮಾನ ವಿತರಿಸಿದರು. ಈ ಸಂದರ್ಭ ಅಧ್ಯಾಪಕರುಗಳಾದ ಚಂದ್ರಶೇಖರ್ ನಾಯರ್, ನಿರ್ಮಲ ಕುಮಾರ್ ಮೊದಲಾದವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ವಿದ್ಯಾಧಿಕಾರಿ ನಂದಿಕೇಶನ್, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ., ಕಾಸರಗೋಡು ಉಪಜಿಲ್ಲಾ ವಿದ್ಯಾಧಿಕಾರಿ ಅಗಸ್ಟಿನ್ ಬರ್ನಾಡ್,ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್ ಕುಮಾರ್ ರೈ, ಅಧ್ಯಾಪಕ ರಘು ರಾಂ ಭಟ್, ಜನಪ್ರತಿನಿಧಿಗಳಾದ ಅಬ್ದುಲ್ಲ ಗುಡ್ಡೆಕೇರಿ, ಸುಪ್ರಿಯ ಶೆಣೈ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.