ಮಧೂರು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ ಹಾಗೂ ಕಲಾವಿದ ಸಂಘಟಕ ಪೆರುವೋಡಿ ಸುಬ್ರಹ್ಮಣ್ಯ ಭಟ್ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕರ್ನಾಟಕ ಮಧ್ಯಮ ಹಾಗೂ ಭಾರೀ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರನ್ನು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಭೇಟಿಯಾಗಿ ಸಿರಿಬಾಗಿಲು ವೆಂಕಪ್ಪಯ್ಯ ಸ್ಮಾರಕ ಭವನದ ನಿರ್ಮಾಣ ಹಾಗೂ ಪ್ರತಿಷ್ಠಾನದ ಕಾರ್ಯಕ್ರಮಗಳು ಹಾಗೂ ಸಾಧನೆಯ ಬಗ್ಗೆ ವಿನಂತಿಪತ್ರ ನೀಡಿ ಮಾಹಿತಿವೊದಗಿಸಲಾಯಿತು. ಪ್ರತಿಷ್ಠಾನಕ್ಕೆ ಪೂರ್ಣ ಸಹಕಾರದ ಭರವಸೆಯನ್ನು ಸಚಿವರು ನೀಡಿರುತ್ತಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷರು ತಿಳಿಸಿರುತ್ತಾರೆ,
ಹುಬ್ಬಳ್ಳಿಯಲ್ಲಿ ಪಾಂಚಜನ್ಯ ಯಕ್ಷಗಾನ ಕಲಾತಂಡ ನೇರಳೆಕಟ್ಟೆ ಹಾಗೂ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದವತಿಯಿಂದ ಭಸ್ಮಾಸುರ ಮೋಹಿನಿ, ಪುರುಷಾಮೃಗ ಯಕ್ಷಗಾನಪ್ರದರ್ಶನ ಏರ್ಪಡಿಸಲಾಗಿತ್ತು.


