ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ, ಅಧ್ಯಾಪಕರಾಗಿ ಮೀಂಜ ಪ್ರದೇಶದ ವಿದ್ಯಾಭ್ಯಾಸ ಕ್ಷೇತ್ರದ ಧ್ರುವ ತಾರೆಯೆನಿಸಿಕೊಂಡಿರುವ ದಿ.ಎಂ.ರಾಮಕೃಷ್ಣ ರಾವ್ ಅವರ 14ನೇ ಪುಣ್ಯತಿಥಿಯಂಗವಾಗಿ ಸೆ.25 ರಂದು ಬುಧವಾರ ಬೆಳಿಗ್ಗೆ 10 ರಿಂದ ಸಂಸ್ಮರಣೆ ಮತ್ತು ಸಮ್ಮಾನ ಕಾರ್ಯಕ್ರಮ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಲಿರುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ನಿವೃತ್ತ ವಿದ್ಯಾಧಿಕಾರಿ ಕೈಲಾಸಮೂರ್ತಿ ಕೆ. ವಹಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಪದವಿ ಕಾಲೇಜು ಮಂಗಳೂರಿನ ಪ್ರಾಂಶುಪಾಲ ಪೆÇ್ರ.ಬಾಲಕೃಷ್ಣ ಶೆಟ್ಟಿ ಕೈರಂಗಳ, ಶಾಲೆಯ ನಿವೃತ್ತ ಶಿಕ್ಷಕ ಕೆ.ನಾರಾಯಣ ಹೊಳ್ಳ ಹಾಗೂ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ವಿ. ಭಾಗವಹಿಸುವರು. ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದೆ.

