ಕುಂಬಳೆ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಮೂರು ದಿನಗಳ ಆವಾಸೀಯ ಸಂಸ್ಕøತ ಶುಕ್ರವಾರ ಆರಂಭಗೊಂಡಿತು. ಧರ್ಮತ್ತಡ್ಕ ಶ್ರೀದುರ್ಗಾ ಪರಮೇಶ್ವರಿ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಶಿಬಿರ ಧರ್ಮತ್ತಡ್ಕ ಶ್ರೀದುರ್ಗಾ ಪರಮೇಶ್ವರಿ ಪ್ರೌಢಶಾಲೆಯಲ್ಲಿ ಆರಂಭಗೊಂಡಿದೆ. ಪುತ್ತಿಗೆ ಪಂಚಾಯಿತಿ ಅಧ್ಯಕ್ಷೆ ಅರುಣ ಜೆ. ಉದ್ಘಾಟಿಸಿದರು. ಸಹಾಯಕ ಶಿಕ್ಷಣಾಧಿಕಾರಿ ದಿನೇಶ ವಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್ ಎನ್. ಮಾತನಾಡಿ, ಇಂತಹ ಶಿಬಿರವು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಅಭಿಪ್ರಾಯಪಟ್ಟರು.
ಅಗಲ್ಪಾಡಿ ಅನ್ನಪೂರ್ಣೇಶ್ವರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಶ್ರೀನಿವಾಸ್ ಭಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಂಸ್ಕøತ ಭಾಷೆಯ ಪ್ರಾಧಾನ್ಯತೆ ಹಾಗೂ ಶಿಬಿರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಅವರಿಗೆ ಶಾಲೆಯ ವತಿಯಿಂದ ಫಲಪುಷ್ಪಗಳನ್ನಿತ್ತು ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಎನ್. ಮಾತನಾಡಿ, ಇಂತಹ ಕಾರ್ಯಕ್ರಮ ನಡೆಸುವುದು ನಮ್ಮ ಶಾಲೆಗೆ ಹೆಮ್ಮೆ ಎಂದರು. ಶಿಬಿರದ ಅಂಗವಾಗಿ ನಡೆದ ವಸ್ತುಪ್ರದರ್ಶನವನ್ನು ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್ ಎನ್. ನೆರವೇರಿಸಿದರು. ಉಪಜಿಲ್ಲೆಯ ಹತ್ತೊಂಬತ್ತು ಶಾಲೆಗಳ ಆಯ್ದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಹಿರಿಯ ಪ್ರಾಥಮಿಕ ವಿಭಾಗ ಹಾಗೂ ಪ್ರೌಢಶಾಲೆಗಳ ನೂರಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಪುತ್ತಿಗೆ ಗ್ರಾಮ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷೆ ಶಾಂತಿ ವೈ, ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆಯ ಪ್ರಬಂಧಕ ಎನ್. ಶಂಕರನಾರಾಯಣ ಭಟ್, ಧರ್ಮತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎನ್. ಮಹಾಲಿಂಗ ಭಟ್, ಧರ್ಮತ್ತಡ್ಕ ಶ್ರೀದುರ್ಗಾ ಪರಮೇಶ್ವರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಇ. ಎಚ್. ಗೋವಿಂದ ಭಟ್ ಶುಭಾಶಂಸನೆಗೈದರು. ಹೈಯರ್ ಸೆಕೆಂಡರಿ ಪ್ರಾಂಶುಪಾಲ ಎನ್. ರಾಮಚಂದ್ರ ಭಟ್ ಸ್ವಾಗತಿಸಿ, ಪ್ರಮೀಳಾ ಡಿ. ಎನ್. ವಂದಿಸಿದರು. ಕೃಷ್ಣ ಪ್ರಸಾದ ಕಡಗದ್ದೆ ಹಾಗೂ ಪ್ರಸೀದ ಟೀಚರ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಕøತ ಅಧ್ಯಾಪಕರು ಹಾಗೂ ವಿದ್ಯಾಸಂಸ್ಥೆಯ ಸರ್ವ ಅಧ್ಯಾಪಕರು ಸಹಕರಿಸಿದರು.