ಬದಿಯಡ್ಕ: ಬದಿಯಡ್ಕ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಸಮಾಜ ವಿಜ್ಞಾನ ಕ್ಲಬ್ ನ ಆಶ್ರಯದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಾರ್ತಾ ವಾಚನ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ
ಅದಿತಿ ಕೆ ದ್ವಿತೀಯ ಬಹುಮಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕುಂಜಾರು ನಿವಾಸಿ ಗೋಪಾಲಕೃಷ್ಣ ಭಟ್ ಮತ್ತು
ವಿಜಯಶ್ರೀ ಕೆ ಇವರ ಪುತ್ರಿ.


