ಬದಿಯಡ್ಕ: ಅಗಲ್ಪಾಡಿ ಜಯನಗರ ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ಸಮೀಪ ನಿರ್ಮಾಣ ಹಂತದಲ್ಲಿರುವ ಭೋಜನ ಶಾಲೆಯ ಕಟ್ಟಡದ ಕಾಮಗಾರಿಗಳ ಬಗ್ಗೆ ಸಮಾಲೋಚನಾ ಸಭೆ ಶ್ರೀ ಮಂದಿರದಲ್ಲಿ ಗುರುವಾರ ಜರಗಿತು. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಸಂಜೀವ ಶೆಟ್ಟಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀಮಂದಿರದ ಸಲಹಾ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಉಪ್ಪಂಗಳ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ವಾಸುದೇವ ಭಟ್ ಉಪ್ಪಂಗಳ, ಕೆಡೆಂಜಿ ಶ್ರೀ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ವಸಂತ ಪೈ ಬದಿಯಡ್ಕ, ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸೇವಾಸಮಿತಿ ತಲೇಕ ಸುಬ್ರಹ್ಮಣ್ಯ ಭಟ್, ಅಖಿಲ ಭಾರತ ಯಾದವ ಮಹಾಸಭಾ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಎಂ.ರಮೇಶ್ ಯಾದವ್ ಪಾಲ್ಗೊಂಡು ಮಾತನಾಡಿದರು.
ವಿಶ್ರಾಂತ ಪ್ರಾಂಶುಪಾಲರುಗಳಾದ ಪ್ರೊ.ಎ. ಶ್ರೀನಾಥ್, ಡಾ. ಬೇ.ಸೀ. ಗೋಪಾಲಕೃಷ್ಣ ಭಟ್, ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ನಾರಾಯಣ, ಉಳ್ಳೋಡಿ ಕೊರಗತನಿಯ ದೇವಸ್ಥಾನದ ಧರ್ಮದರ್ಶಿ ಗಣೇಶ, ಕೇರಳ ಗ್ರಾಮೀಣ ಬ್ಯಾಂಕ್ ವಿಶ್ರಾಂತ ಪ್ರಬಂಧಕ ಕೃಷ್ಣಮೂರ್ತಿ, ಡಾ. ವೇಣುಗೋಪಾಲ ಕಳೆಯತ್ತೋಡಿ, ಅಧ್ಯಾಪಕ ಹರಿನಾರಾಯಣ ಎಸ್., ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾಸಮಿತಿ ಅಧ್ಯಕ್ಷ ರಾಜೇಶ್ ಮಜಕ್ಕಾರು, ಅಗಲ್ಪಾಡಿ ಯಾದವ ಸೇವಾಸಂಘದ ಅಧ್ಯಕ್ಷ ಕುಂಞÂರಾಮ ಮಣಿಯಾಣಿ ಯಾನೆ ನಾರಾಯಣ ಮಣಿಯಾಣಿ, ಯಾದವ ಸಭಾದ ಗಂಗಾಧರ ತೆಕ್ಕೆಮೂಲೆ ಶುಭಾಶಂಸನೆಗೈದರು. ಅಧ್ಯಕ್ಷ ಬಾಬು ಮಾಸ್ತರ್ ಅಗಲ್ಪಾಡಿ ಸ್ವಾಗತಿಸಿ, ಗೌರವಾಧ್ಯಕ್ಷೆ ವಸಂತಿ ಟೀಚರ್ ವಂದಿಸಿದರು.ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ಪ್ರಧಾನ ಕಾರ್ಯದರ್ಶಿ ರಮೇಶ್ ಕೃಷ್ಣ ಪದ್ಮಾರು ನಿರೂಪಿಸಿದರು.


