ಕಾಸರಗೋಡು: ಕೇರಳಕ್ಕೆ ಸೇರಿದರೂ ಕಾಸರಗೋಡು ಭಾಷಾ ಅಲ್ಪಸಂಖ್ಯಾತ ಪ್ರದೇಶ. ಹೀಗಿದ್ದರೂ ಕಾಸರಗೋಡಿನ ವಿದ್ಯಾವಂತರಿಗೆ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲೂ ಅವಕಾಶವಿಲ್ಲದೆ ವಂಚಿತರಾಗಿದ್ದಾರೆ. ಇದು ಭಾಷಾ ಅಲ್ಪಸಂಖ್ಯಾತರಿಗೆಸೆದ ಅನ್ಯಾಯ. ಈ ಅನ್ಯಾಯವನ್ನು ಪರಿಹರಿಸಬೇಕೆಂದು ಆಗ್ರಹಿಸಿ ಕಾಸರಗೋಡು ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಅವರಿಗೆ ಪುರುಷೋತ್ತಮ ನಡಕ್ಕಾಲ್ ಚಂದ್ರಗಿರಿ ಅವರು ಮನವಿಯನ್ನು ಸಲ್ಲಿಸಿದ್ದಾರೆ.
ಕಾಸರಗೋಡಿನ ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಕೇಂದ್ರ ಸರಕಾರದ ಗಮನಕ್ಕೆ ತರಬೇಕೆಂದು ಅವರು ಮನವಿಯಲ್ಲಿ ವಿನಂತಿಸಿದ್ದಾರೆ. ಭಾಷಾ ಅಲ್ಪಸಂಖ್ಯಾತ ಕನ್ನಡಿಗರಿಗೆ ಕನ್ನಡದಲ್ಲೇ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಮನವಿ ಸ್ವೀಕರಿಸಿದ ಸಂಸದರು ಕಾಸರಗೋಡಿನ ಕನ್ನಡಿಗರ ಸಮಸ್ಯೆ ಪರಿಹರಿಸಲು ಶೀಘ್ರವೇ ಕೇಂದ್ರ ಸರಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.