ಕುಂಬಳೆ: ಶೈಕ್ಷಣಿಕವಾಗಿ ಹಿಂದುಳಿದಿರುವ ಬಂಟ ಸಮುದಾಯವನ್ನು ಮೇಲೆತ್ತುವ ಲಕ್ಷ್ಯವಿರಿಸಿ ಆರಂಭಿಸಲಾದ ಬಂಟರ ಸಂಘ ಇಂದು ವಿದ್ಯಾಕ್ಷೇತ್ರದಲ್ಲಿ ಮುನ್ನಡೆಯಲು ಸಾಧ್ಯವಾಗಿದೆ. ಉನ್ನತ ಶಿಕ್ಷಣ ಪಡೆಯಲು, ಸ್ಪರ್ಧಾತ್ಮಕವಾದ ಐಎಎಸ್, ಐಪಿಎಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಬಂಟ ಸಮುದಾಯದ ಯುವ ಪ್ರತಿಭೆಗಳು ಆಸಕ್ತರಾಗಬೇಕಿದೆ ಎಂದು ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು, ಜಾಗತಿಕ ಬಂಟರ ಸಂಗದ ಒಕ್ಕೂಟ ಹಾಗೂ ಬೆಂಗಳೂರು ಬಂಟರ ಸಂಘದ ಸಹಯೋಗದಲ್ಲಿ ಕಾಸರಗೋಡು ಜಿಲ್ಲಾ ಬಂಟರ ಸಂಘದ ಆಶ್ರಯದಲ್ಲಿ ಕುಂಬಳೆಯ ಸಿಟಿ ಹಾಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿದ್ಯಾಭ್ಯಾಸ ಸಹಾಯಧನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಶೆಟ್ಟಿ, ಜಿಲ್ಲಾ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಿ.ಕೆ.ಶೆಟ್ಟಿ ಬೊಳ್ನಾಡುಗುತ್ತು, ಉದ್ಯಮಿ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಸಂಕಬೈಲು ಸತೀಶ ಅಡಪ, ಮಂಜೇಶ್ವರ ಫಿರ್ಕಾ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಕೆ.ದಾಸಣ್ಣ ಆಳ್ವ ಕುಳೂರು ಬೀಡು, ಕಾಸರಗೋಡು ವಲಯ ಬಂಟರ ಸಂಘದ ಅಧ್ಯಕ್ಷ ಸುಬ್ಬಣ್ಣ ಕುಚ್ಚಕ್ಕಾಡು, ಬಂಟರ ಯಾನೆ ನಾಡವರ ಮಾತೃಸಂಘದ ಪದಾಧಿಕಾರಿಗಳಾದ ರಘು ಶೆಟ್ಟಿ ಕುಂಜತ್ತೂರು, ಮಧುಕರ ರೈ ಕೊರೆಕ್ಕಾನ, ಮುಕ್ತಾನಂದ ರೈ, ಜಿಲ್ಲಾ ಕೋಶಾಧಿಕಾರಿ ಪಿ.ಜಿ.ಚಂದ್ರಹಾಸ ರೈ ಪೆರಡಾಲಗುತ್ತು, ಜೊತೆ ಕಾರ್ಯದಶಿಧಗಳಾದ ಅರವಿಂದಾಕ್ಷ ಭಂಡಾರಿ, ಉಪಾಧ್ಯಕ್ಷ ವಸಂತರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಶುಭಾಶಂಸನೆಗೈದರು.
ಸಮಾರಂಭದಲ್ಲಿ ದಕ್ಷಿಣ ಏಷ್ಯಾ ಲಾಡ್ಲಿ ಮೀಡಿಯಾ ಪ್ರಶಸ್ತಿ ಪುರಸ್ಕøತ ಪತ್ರಕರ್ತ ರಾಜೇಶ್ ರೈ ಚಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಎಪ್ಲಸ್ ಅಂಕಗಳೊಂದಿಗೆ ಉತ್ತೀರ್ಣರಾದ ಕಾಸರಗೋಡಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಾದ ವಿನೀತ್ ರೈ ಆದೂರು ಹಾಗೂ ಯುಕ್ತಿ ಶೆಟ್ಟಿ ಮಾಯಿಪ್ಪಾಡಿ ಇವರಿಗೆ ಡಾ..ಕಯ್ಯಾರ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿದ್ಯಾಭ್ಯಾಸ ನೆರವು ಹಸ್ತಾಂತರ ಈ ಸಂದರ್ಭ ನಡೆಯಿತು.
ಬಂಟರ ಸಂಘದ ಜಿಲ್ಲಾ ಉಪಾಧ್ಯಕ್ಷ ಸದಾಶಿವ ರೈ ಬೆಳ್ಳಿಪ್ಪಾಡಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ದಾಮೋದರ ಶೆಟ್ಟಿ ವಂದಿಸಿದರು. ರೋಹಿತಾಕ್ಷಿ ಬಿ.ರೈ ಹಾಗೂ ರವೀಂದ್ರ ರೈ ಮಲ್ಲಾವರ ಕಾರ್ಯಕ್ರಮ ನಿರೂಪಿಸಿದರು.


