ಕುಂಬಳೆ: ಬಿಲ್ಲವ ಸೇವಾ ಸಂಘ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಮಹಿಳಾ ವೇದಿಕೆ ಕುಂಬಳೆ ಇವುಗಳ ಜಂಟಿ ಆಶ್ರಯದಲ್ಲಿ ಪಾರ್ತಿಸುಬ್ಬ ಕ್ರೀಡಾಂಗಣದಲ್ಲಿ ಕ್ರೀಡಾ ಸ್ಪರ್ಧೆಗಳು ಸೆ.8 ರಂದು ಭಾನುವಾರ ನಡೆಯಿತು.
ಕುಂಬಳೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ನವೀನ್ ಪೂಜಾರಿ ಕಂಚಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ಶೀನಪ್ಪ ಪೂಜಾರಿ ಉದ್ಘಾಟಿಸಿದರು. ಹಿರಿಯ ಸಂಘಟಕ ಸುಬ್ಬ ಪೂಜಾರಿ ಶೇಡಿಕಾವು ಉಪಸ್ಥಿತರಿದ್ದರು.
ಬಿಲ್ಲವ ಸೇವಾ ಸಂಘ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆಯ ಜಂಟಿ ಆಶ್ರಯದಲ್ಲಿ ಸೆ.13 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿತ್ತು.


