ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಥಾಪಕ ದಿ.ಯಂ.ರಾಮಕೃಷ್ಣ ರಾವ್ ಅವರ ಸಂಸ್ಮರಣಾ ಕಾರ್ಯಕ್ರಮ ದಿ.ರಾಮಕೃಷ್ಣ ರಾವ್ ಸಭಾ ಭವನದಲ್ಲಿ ಬುಧವಾರ ಜರಗಿತು.
ಕಾರ್ಯಕ್ರಮದಲ್ಲಿ ಮಂಗಳೂರು ಶ್ರೀ ರಾಮಕೃಷ್ಣ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ರಾಮಕೃಷ್ಣ ರಾವ್ ಅವರು ಶಾಲೆಯನ್ನು ಪ್ರಾರಂಭಿಸಿ ಗ್ರಾಮೀಣ ಪ್ರದೇಶದ ಸರ್ವತೋಮುಖ ಏಳಿಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ನಿವೃತ್ತ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ ವಹಿಸಿದ್ದರು. ಕೈರಂಗಳ ಶಾಲಾ ನಿವೃತ್ತ ಶಿಕ್ಷಕ ಕೆ.ನಾರಾಯಣ ಹೊಳ್ಳ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಸಮಾಜ ಸೇವಕ, ಸಂಘಟಕ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸುಧಾಕರ.ವಿ, ಸಂಚಾಲಕಿ ರಾಜೇಶ್ವರಿ ಎಸ್.ರಾವ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಪ್ರಸಾದ್, ಮಾತೃಸಂಘದ ಅಧ್ಯಕ್ಷೆ ಕೈರುನ್ನಿಸ ಉಪಸ್ಥಿತರಿಸ್ದರು. ಈ ಸಂದರ್ಭದಲ್ಲಿ ದಿ.ರಾಮಕೃಷ್ಣ ರಾವ್ ದತ್ತಿನಿಧಿ ಯೋಜನೆಯಿಂದ ಶಾಲಾ ವಿದ್ಯಾರ್ಥಿಗಳಾದ ಚಿದಾಕಾಂತ್ ಮತ್ತು ಲಿಖಿತ್‍ರವರಿಗೆ ನಗದು ಬಹುಮಾನವನ್ನು ನೀಡಲಾಯಿತು. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್.ಆರ್.ಎಂ ಸ್ವಾಗತಿಸಿ, ಶಿಕ್ಷಕಕ ಅರವಿಂದಾಕ್ಷ ಭಂಡಾರಿ ವಂದಿಸಿದರು. ಅಧ್ಯಾಪಕ ಹರೀಶ್ ಸುಲಾಯ ಒಡ್ಡಂಬೆಟ್ಟು ಕಾರ್ಯಕ್ರಮ ನಿರೂಪಿಸಿದರು.


