ಕಾಸರಗೋಡು: ಕಾಸರಗೋಡು ಪೆರ್ಲ ಸಮೀಪದ ಸ್ವರ್ಗ ಮನೆತನದ ನ್ಯಾಯಮೂರ್ತಿ.ಎಸ್.ರವೀಂದ್ರ ಭಟ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಪದೋನ್ನತಿ ಲಭಿಸಿದೆ.
ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅವರು ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಕೊಲಿಜಿಯಂ ಆ.28ರಂದು ನೀಡಿದ್ದ ಶಿಫಾರಸಿಗೆ ರಾಷ್ಟ್ರಪತಿಯವರು ಸೆ.18ರಂದು ಅಂಕಿತ ಹಾಕಿದ್ದು ಸೆ.23ರಂದು ಬೆಳಿಗ್ಗೆ 10.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


