HEALTH TIPS

ಕಾಶ್ಮೀರ: ಸೋಪೋರೆಯಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ, 20 ಮಂದಿಗೆ ಗಾಯ

   
    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಉಗ್ರರು ಸೋಮವಾರ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ 20 ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
   ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿವೆ. ಎರಡು ದಿನಗಳ ಹಿಂದಷ್ಟೇ ಶ್ರೀನಗರದ ಕಾರನ್ನಗರ್ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಆರು ಮಂದಿ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು.
    ಪೊಲೀಸರ ಮಾಹಿತಿ ಪ್ರಕಾರ, ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ಪ್ರದೇಶಕ್ಕೆ ಯುರೋಪಿಯನ್ ಸಂಸದೀಯ ನಿಯೋಗ ಭೇಟಿ ನೀಡುವ ಮುನ್ನಾ ದಿನವೇ ಉಗ್ರರು ಈ ಕೃತ್ಯ ಎಸಗಿದ್ದಾರೆ ಎಂದು ವರದಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries