ಕುಂಬಳೆ: ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ ಮಂಜೇಶ್ವರ ಮಂಡಲ ಉಪಚುನಾವಣೆ ಅ.21ರಂದು ನಡೆಯಲಿದ್ದು, ಹಿಂದೆಂದೂ ಕಂಡರಿಯದ ರೀತಿಯಲ್ಲಿ ರಾಜಕೀಯ ಪಕ್ಷಗಳು ಕನ್ನಡಿಗರನ್ನೇ ಅಭ್ಯರ್ಥಿಗಳನ್ನಾಗಿಸಿದ್ದು ಪ್ರಸ್ತುತ ಕನ್ನಡಿಗರ ಹೋರಾಟದ ಫಲವಾಗಿದೆ. ಕನ್ನಡಿಗರ ಮತಗಳೇ ನಿರ್ಣಾಯಕವಾಗಿರುವ ಮಂಜೇಶ್ವರ ಉಪಚುನಾವಣೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಸಮಸ್ಯೆಗಳ ಪರಿಹಾರೋಪಾಯಗಳ ಕುರಿತು ಅಭ್ಯರ್ಥಿಗಳ ಮನ ಇಂಗಿತವನ್ನು ಅರಿಯುವ ಸಲುವಾಗಿ ಎಲ್ಲಾ ಅಭ್ಯರ್ಥಿಗಳ ಸಮ್ಮುಖದಲ್ಲಿ ಕನ್ನಡಿಗರೊಂದಿಗೆ ಅಭ್ಯರ್ಥಿಗಳು ಎಂಬ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿದೆ. ಇಂದು ಬೆಳಿಗ್ಗೆ 10.30ರಿಂದ 11.30ರ ತನಕ ಕುಂಬಳೆ ಸಿಂಡಿಕೇಟ್ ಬ್ಯಾಂ ಕ್ ನ ಮಹಡಿಯ ಮಾಧವ ಪೈ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಅವರವರ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡ ಹೋರಾಟ ಸಮಿತಿ ವಿನಂತಿಸಿದೆ.

