ಸಮರಸ ಚಿತ್ರ ಸುದ್ದಿ: ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಅ.26ರಿಂದ 30ರವರೆಗೆ ನಡೆಯಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ ಅವರು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲುಕೋಡಿ ಅವರಿಗೆ ನೀಡಿ ಶುಕ್ರವಾರ ಬಿಡುಗಡೆಗೊಳಿಸಿದರು.