ಬದಿಯಡ್ಕ: ಕೇರಳ ಮರಾಟಿ ಶಾರದೋತ್ಸವ ಸಮಿತಿಯ ವತಿಯಿಂದ ಬದಿಯಡ್ಕ ಶ್ರೀ ಗುರುದನದಲ್ಲಿ ನಡೆಯುತ್ತಿರುವ 12 ನೇ ವರ್ಷದ ಶಾರದೋತ್ಸವವು ಮಂಗಳವಾರ ಸಂಜೆ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ವರದಾ ನದಿಯಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ದೇವಿಯ ವಿಗ್ರಹ ಜಲಸ್ಥಂಭನದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ವೇದಮೂರ್ತಿ ವೆಂಕಟೇಶ್ವರ ಭಟ್ ಪಟ್ಟಾಜೆ ಹಾಗೂ ತಂಡದವರು ವೈದಿಕ ಕಾರ್ಯಗಳ ನೇತೃತ್ವ ವಹಿಸಿದ್ದರು. ಅಪರಾಹ್ನ ಆರಂಭವಾದ ಭವ್ಯ ಮೆರವಣಿಗೆಯಲ್ಲಿ ಮರಾಟಿ ಸಮಾಜಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮುತ್ತುಕೊಡೆ, ಮಕ್ಕಳ ನೃತ್ಯ ಹಾಗೂ ಚೆಂಡೆಮೇಳ ಗಮನಸೆಳೆಯಿತು. ಬದಿಯಡ್ಕ ಪೇಟೆಯಲ್ಲಿ ಸಾಗಿದ ಮೆರವಣಿಗೆಯು ಪೆರಡಾಲದಲ್ಲಿ ಸಂಪನ್ನಗೊಂಡಿತು. ಬೆಳಿಗ್ಗೆ ಮಹಾಪೂಜೆ, ವಿವಿಧ ಭಜನಾ ಸಂಘಗಳಿಂದ ಭಜನೆ ನಡೆಯಿತು.






