ಬದಿಯಡ್ಕ: ಹಿರಿಯ ನಾಗರಿಕರ ವೇದಿಕೆಯ ಬದಿಯಡ್ಕ ಘಟಕ ವತಿಯಿಂದ ಬದಿಯಡ್ಕ ಹಗಲುಮನೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ನಿವೃತ್ತ ಪ್ರಾಂಶುಪಾಲ ಡಾ. ಬೇ.ಸೀ.ಗೋಪಾಲಕೃಷ್ಣ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಮುಪ್ಪು ಸಮಸ್ಯೆಯಲ್ಲ. ಸದಾ ಚಟುವಟಿಕೆಯಿಂದಿರುವುದರಿಂದ ಆರೋಗ್ಯ ವೃದ್ಧಿಸುವುದಲ್ಲದೆ ಮನಸ್ಸಿಗೆ ಶಾಂತಿ ನೆಮ್ಮದಿಯು ಲಭಿಸುತ್ತದೆ ಎಂದರು.
ವೇದಿಕೆಯ ಕಾರ್ಯದರ್ಶಿ ಸಂಪತ್ತಿಲ ಶಂಕರನಾರಾಯಣ ಭಟ್ಟರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಪೆರ್ಮುಖ ಈಶ್ವರ ಭಟ್ ಸ್ವಾಗತಿಸಿ, ಅಧ್ಯಕ್ಷ ಪಿಲಿಂಗಲ್ಲು ಕೃಷ್ಣ ಭಟ್ ವಂದಿಸಿದರು.


