ಉಪ್ಪಳ: ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆಯಲ್ಲಿ ಹಯರ್ ಸೆಕೆಂಡರಿ ವಿಭಾಗದಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಶಿವೇಶ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಚೇವಾರು ಶಾಲಾ ಮುಖ್ಯ ಶಿಕ್ಷಕ ಶ್ಯಾಮ್ ಭಟ್-ಗೀತಾ ದಂಪತಿ ಸುಪುತ್ರನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.