ಮುಳ್ಳೇರಿಯ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯಂಗವಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಣಿಮೂಲೆಯಲ್ಲಿ ಗಾಂಧಿ ಸ್ಮøತಿ ಕಾರ್ಯಕ್ರಮ ನಡೆಯಿತು.
ಮಾತೃಸಂಘದ ಅಧ್ಯಕ್ಷೆ ಉಷಾಲತ ಅವರು ಗಾಂಧೀಜಿಯವರ ಭಾವಚಿತ್ರವನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಯಂ. ಕೆ, ಕುತ್ತಿಕೋಲ್ ಗ್ರಾಮ ಪಂಚಾಯತಿ ಸದಸ್ಯೆ ಧರ್ಮಾವತಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಶಂಕರ ನಾರಾಯಣ ಭಟ್ ಉಪಸ್ಥಿತರಿದ್ದು ಮಾತನಾಡಿದರು. ರಕ್ಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನ ಸಲ್ಲಿಸಿದರು.





