ಬದಿಯಡ್ಕ: ಪ್ರಧಾನಮಂತ್ರಿ ಉಜ್ವಲ ಯೋಜನೆಯಲ್ಲಿ ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಆಶ್ರಯದಲ್ಲಿ ನಡೆದ ಉಚಿತ ಅನಿಲ ಒಲೆ (ಗ್ಯಾಸ್ ಸ್ಟೌ)ವಿತರಣಾ ಕಾರ್ಯಕ್ರಮವನ್ನು ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಅಧ್ಯಕ್ಷ ಬಿ. ರಾಜೇಶ್ ಶೆಟ್ಟಿ ಉದ್ಘಾಟಿಸಿದರು. ಮವ್ವಾರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 40 ರಷ್ಟು ಫಲಾನುಭವಿಗಳಿಗೆ ಉಚಿತವಾಗಿ ಅನಿಲ ಜಾಡಿ, ಒಲೆ ವಿತರಿಸಲಾಯಿತು. ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಹಿಂದುಳಿದ ಜಾತಿ, ವರ್ಗ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುಂದರ ಮವ್ವಾರು, ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಕಾರ್ಯದರ್ಶಿ ಶಶಿಧರ ತೆಕ್ಕೆಮೂಲೆ, ಮಹಿಳಾಮೋರ್ಚಾ ನೇತಾರೆ ಯಶೋದಾ ಎನ್., ಗ್ರಾಮ ಪಂಚಾಯಿತಿ ಸದಸ್ಯರಾದ ಶೈಲಜಾ ಭಟ್, ಶಾಂತಾ ಕುಮಾರಿ, ನಳಿನಿ ಮೊದಲಾದವರು ಉಪಸ್ಥಿತರಿದ್ದರು.


