ಉಪ್ಪಳ: ಪೈವಳಿಕೆ ನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಲಾಗಿರುವ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವನ್ನು ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ ಜೆ ಶೆಟ್ಟಿ ಅವರು ಮಂಗಳವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷೆ ಮಮತಾ ದಿವಾಕರ್, ಮಂಜೇಶ್ವರ ಉಪಜಿಲ್ಲಾ ಸಹಾಯಕ ವಿದ್ಯಾಧಿಕಾರಿ ದಿನೇಶ್ ವಿ, ಮಂಗಳೂರು ಆಕಾಶವಾಣಿ ನಿಲಯದ ನಿವೃತ್ತ ನಿಲಯ ನಿರ್ದೇಶಕ, ಸಾಹಿತಿ ವಸಂತಕುಮಾರ್ ಪೆರ್ಲ, ಗ್ರಾ.ಪಂ.ಉಪಾಧ್ಯಕ್ಷೆ ಸುನಿತ ವಲ್ಟಿ ಡಿಸೋಜ, ಬ್ಲಾ.ಪಂ.ಉಪಾಧ್ಯಕ್ಷೆ ಮಮತಾ ದಿವಾಕರ್,ಡಯಟ್ ಪ್ರಾಂಶುಪಾಲ ಡಾ.ಎ.ಬಾಲನ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಬೆಳಿಗ್ಗೆ 9ಕ್ಕೆ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲಕೋಡಿ ಧ್ವಜಾರೋಹಣಗೈದರು.


