ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಊರ ಪರವೂರ ಭಕ್ತಾದಿಗಳೆಲ್ಲ ಸೇರಿ ನಿಶ್ಚಯಿಸಿದಂತೆ ತಂತ್ರಿವರ್ಯ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು 2020 ಫೆಬ್ರವರಿ 6ರಿಂದ ಫೆಬ್ರವರಿ 12ರ ತನಕ ಜರಗಲಿರುವುದು. ಕಾರ್ಯಕ್ರಮ ಯಶಸ್ಸಿಗೊಳಿಸಲು ಬ್ರಹ್ಮಕಲಶೋತ್ಸವ ಸಮಿತಿ, ವಿವಿಧ ಉಪಸಮಿತಿಗಳ ರೂಪೀಕರಣಕ್ಕಾಗಿ ನವಂಬರ್ 24ರಂದು ಭಾನುವಾರ ಬೆಳಿಗ್ಗೆ 10 ರಿಂದ ದೇವಸ್ಥಾನದ ವಠಾರದಲ್ಲಿ ವಿಶೇಷ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಮಹಿಷಮರ್ಧಿನಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗೋಸಾಡ-ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ ನ.24ರಂದು
0
ನವೆಂಬರ್ 22, 2019