ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಕುಂಜತ್ತೂರಿನ ಶ್ರೀ ಮಹಾಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನಕಲಾ ಸಂಘ ಮತ್ತು ಅಧ್ಯಯನ ಕೇಂದ್ರ ಸಂಸ್ಥೆಯಲ್ಲಿ ನಡೆಸಲಾಗುವ ಎರಡು ತಿಂಗಳ ಯಕ್ಷಗಾನ ಕಲಿಕಾ ತರಗತಿ ಉದ್ಘಾಟನೆ ನ. 24 ರಂದು ಭಾನುವಾರ ಸಂಜೆ 4ಗಂಟೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನ ಕುಂಜತ್ತೂರಿನಲ್ಲಿ ನಡೆಯಲಿದೆ.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಯೋಗೀಶ ರಾವ್ ಚಿಗುರುಪಾದೆ ಉದ್ಘಾಟಿಸುವರು. ಸಮಾರಂಭದಲ್ಲಿ ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಚಕ್ರತೀರ್ಥ ಅಧ್ಯಕ್ಷತೆವಹಿಸಲಿದ್ದು, ಶ್ರೀಕ್ಷೇತ್ರದ ಪ್ರಧಾನ ಅರ್ಚಕ ಮಂಜುನಾಥ ಭಟ್, ಶ್ರೀಮಹಾಲಿಂಗೇಶ್ವರ ವಿದ್ಯಾನಿಕೇತನ ಟ್ರಸ್ಟ್ ಕುಂಜತ್ತೂರು ಇದರ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಬಳಕ, ಮಂಜೇಶ್ವರ ಗ್ರಾಮ ಪಂಚಾಯತಿ ಸದಸ್ಯೆ ಶೋಭ ವಿ. ಶೆಟ್ಟಿ ಚಕ್ರತೀರ್ಥ, ನಾಟ್ಯ ಗುರುಗಳಾದ ಜಗದೀಶ ಗಟ್ಟಿ ಉಚ್ಚಿಲ ಅತಿಥಿಗಳಾಗಿ ಭಾಗವಹಿಸುವರು ಎಂದು ಯಕ್ಷಗಾನ ಅಧ್ಯಯನ ಕೇಂದ್ರ ಪ್ರಕಟಣೆ ತಿಳಿಸಿದೆ.

