HEALTH TIPS

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.8.5ಕ್ಕೆ ಏರಿಕೆ, 3 ವರ್ಷಗಳಲ್ಲೇ ಗರಿಷ್ಠ: ಸಿಎಂಐಇ ವರದಿ

       
        ನವದೆಹಲಿ: ದೇಶದ ನಿರುದ್ಗೋಗ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಅಕ್ಚೋಬರ್ ತಿಂಗಳಿನಲ್ಲಿ ಭಾರತದಲ್ಲಿನ ನಿರುದ್ಯೋಗ ಪ್ರಮಾಣ ಶೇ.8.5ಕ್ಕೆ ಹೆಚ್ಚಳವಾಗಿದೆ.
    ಈ ಕುರಿತಂತೆ ಭಾರತೀಯ ಆರ್ಥಿಕತೆ ನಿಗಾ ಕೇಂದ್ರ (ಸಿಎಂಐಇ) ಶುಕ್ರವಾರ ಈ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ದೇಶದಲ್ಲಿನ ನಿರುದ್ಯೋಗ ಪ್ರಮಾಣ ಅಕ್ಟೋಬರ್? ತಿಂಗಳಿನಲ್ಲಿ ಶೇ.8.5ಕ್ಕೆ ಹೆಚ್ಚಳವಾಗಿದೆ. ಇದು ಕಳೆದ ಮೂರು ವರ್ಷಗಳಲ್ಲೇ ಇದು ಗರಿಷ್ಠ ಪ್ರಮಾಣವಾಗಿದೆ ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಅಲ್ಲದೆ 2016ರ ಆಗಸ್ಟ್? ತಿಂಗಳ ಬಳಿಕ ರಾಷ್ಟ್ರದಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿರುವುದು ಇದೇ ಮೊದಲು ಎಂದು ವರದಿಯಲ್ಲಿ ತಿಳಿಸಲಾಗಿದೆ.
     ನಿರುದ್ಯೋಗ ಪ್ರಮಾಣ ತಗ್ಗಿಸವು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಉಲ್ಲೇಖವಾಗಿದೆಯಾದರೂ, ರಾಷ್ಟ್ರದಲ್ಲಿ ಆರ್ಥಿಕ ಹಿಂಜರಿತದ ಪರಿಸ್ಥಿತಿ ಇರುವುದು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಉದ್ಯೋಗಾವಕಾಶ ಹೆಚ್ಚಿಸಿ, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ನಿರುದ್ಯೋಗ ಸಮಸ್ಯೆ ಪರಿಹಾರವಾಗುತ್ತಿಲ್ಲ.  ರಾಷ್ಟ್ರದಲ್ಲಿನ ಮೂಲಸೌಕರ್ಯ ವಲಯದಲ್ಲಿನ ಸೆಪ್ಟೆಂಬರ್ ನ ಬೆಳವಣಿಗೆಯಲ್ಲಿ ವರ್ಷದಿಂದ ವರ್ಷಕ್ಕೆ ಶೇ.5.2 ಇಳಿಕೆಯಾಗಿರುವುದು ನಿರುದ್ಯೋಗ ಸಮಸ್ಯೆ ಉಲ್ಬಣಕ್ಕೆ ಕಾರಣ ಎಂದು ಎಂದು ಅಭಿಪ್ರಾಯಪಡಲಾಗಿದೆ.
      ರಾಷ್ಟ್ರದ ಅಸಂಘಟಿತ ವಲಯದಲ್ಲಿ ಕೂಡ ನಿರುದ್ಯೋಗ ಸಮಸ್ಯೆ ಕಾಣಿಸಿಕೊಂಡಿದೆ. ಕೂಲಿ ಕೆಲಸಗಳಿಗೆ ಹೆಚ್ಚಿನ ಅವಕಾಶ ಇಲ್ಲದಿರುವ ಕಾರಣ ದಿನಗೂಲಿ ಕಾರ್ಮಿಕರು ಕೂಡ ಕೆಲಸವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries