ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪನದಲ್ಲಿ 5.3 ತೀವ್ರತೆಯ ಕಂಪನ ದಾಖಲಾಗಿದೆ. ಮಂಗಳವಾರ ಸಂಜೆ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಿ ಭೂ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ದೆಹಲಿ-ಎನ್‍ಸಿಆರ್, ಉತ್ತರ ಪ್ರದೇಶ, ಉತ್ತರಾಖಂಡ್‍ನಲ್ಲಿ ಸಂಜೆ ಭೂಮಿ ಕಂಪಿಸಿದ ಅನುಭವವಾಗಿದೆ. ಸೋಮವಾರ ಗುಜರಾತ್ ರಾಜ್ಯದ ಕಚ್ ಪ್ರದೇಶದಲ್ಲಿ 4.3 ತೀವ್ರತೆಯ ಕಂಪನ ದಾಖಲಾಗಿತ್ತು.


