ಮಂಜೇಶ್ವರ: ಮೂಡಂಬೈಲು ಸರ್ಕಾರಿ ಪ್ರೌಢ ಶಾಲೆಯಲ್ಲಿ ಕನ್ನಡ ಸಾಹಿತ್ಯ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ಚುಟುಕು ಸಾಹಿತ್ಯ ಕಾರ್ಯಾಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.
ಸಿರಿಗನ್ನಡ ವೇದಿಕೆಯ ಸಂಚಾಲಕ, ಸಾಹಿತಿ ಶಂಕರನಾರಾಯಣ ಭಟ್ ಕಕ್ಕೆಪ್ಪಾಡಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಮುನ್ನಡೆಸಿದರು. ವಿದ್ಯಾರ್ಥಿಗಳಿಗೆ ಚುಟಕು ಸಾಹಿತ್ಯದ ಮಹತ್ವ ಹಾಗೂ ರಚನೆಯ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಜಾರ್ಜ್ ಮಾಸ್ತರ್ ಸ್ವಾಗತಿಸಿ, ವಂದಿಸಿದರು.


