ಬದಿಯಡ್ಕ: ಪ್ರತಿಭೆಗಳೊಂದಿಗೆ ವಿದ್ಯಾರ್ಥಿಗಳು ಎಂಬ ಕಾರ್ಯಕ್ರಮವದಂಗವಾಗಿ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಕಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಗಳು ಸೋಮವಾರ ಪ್ರಖ್ಯಾತ ಯಕ್ಷಗಾನ ಕಲಾವಿದ ಬಾಲಕೃಷ್ಣ ಮಣಿಯಾಣಿ ಮವ್ವಾರು ಅವರ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಯಕ್ಷಗಾನ ಕ್ಷೇತ್ರದ ತನ್ನ ಅನುಭವಗಳನ್ನು ಅವರು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ನಳದಮಯಂತಿ ಕಥೆಯ ಬಾಹುಕನ ಪಾತ್ರವನ್ನು ಮನೋಜ್ಞವಾಗಿ ಅಭಿನಯಿಸಿ ಮಕ್ಕಳನ್ನು ರಂಜಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಅವರು ಶಾಲು ಹೊದೆಸಿ ಸನ್ಮಾನಿಸಿದರು. ಶಾಲಾ ಅಧ್ಯಾಪಿಕೆಯರಾದ ಅಂಕಿತ, ಸುಜಯ, ಸೌಮ್ಯ ಜೊತೆಗಿದ್ದರು.


