ಕಾಸರಗೋಡು: ಕನ್ನಡ ಹೋರಾಟ ಸಮಿತಿಯ ವಿಶೇಷ ಸಭೆಯು ಡಿ.22ರಂದು ಬೆಳಗ್ಗೆ 10ಕ್ಕೆ ನಗರದ ಬ್ಯಾಂಕ್ ರಸ್ತೆಯ ಕಾಸರಗೋಡು ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆಯಲಿದೆ. ಪ್ರಸಕ್ತ ಕನ್ನಡಿಗರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.
ಸಭೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪದಾಕಾರಿಗ4Àು, ಕನ್ನಡ ಅಧ್ಯಾಪಕರು, ಉದ್ಯೋಗಾರ್ಥಿಗ4Àು ಹಾಗೂ ಕನ್ನಡ ಭಾಷಾಬಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಹೋರಾಟ ಸಮಿತಿ ಪದಾಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

