ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 2020 ಫೆಬ್ರವರಿ 6ರಿಂದ 12ರ ತನಕ ನಡೆಯುವ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.30 ಸೋಮವಾರ ಬೆಳಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಬ್ರಹ್ಮಶ್ರೀ ಉಳಿಯ ವಿಷ್ಣು ಅಸ್ರ ಅವರು ಬಿಡುಗಡೆ ಮಾಡಲಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂಜೀವ ಶೆಟ್ಟಿ ಮೊಟ್ಟೆಕುಂಜ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉದ್ಯಮಿ ರಂಗನಾಥ ರಾವ್ ಮುಳ್ಳೇರಿಯ ಉಪಸ್ಥಿತರಿರುವರು. ಗೋಪಾಲಕೃಷ್ಣ ಭಟ್ ಭಸ್ಮಜೆ ಶುಭಾಶಂಸನೆಗೈಯ್ಯುವರು. ಕ್ಷೇತ್ರದ ಆನುವಂಶಿಕ ಮೊಕ್ತೇಸರ ಶ್ರೀನಿವಾಸ ಅಮ್ಮಣ್ಣಾಯ ಪಾವೂರು, ಸೇವಾ ಸಮಿತಿಯ ಉಪಾಧ್ಯಕ್ಷ ರವೀಂದ್ರ ರೈ ಗೋಸಾಡ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕುದ್ಕಾಡಿ ನಾರಾಯಣ ರೈ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಸುಧಾಮ ಗೋಸಾಡ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವೇಣುಗೋಪಾಲ ಕಳೆಯತ್ತೋಡಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ ರೈ ಮಠದಮೂಲೆ, ಸೇವಾ ಸಮಿತಿಯ ಹಿರಿಯ ಸದಸ್ಯ ಅನಂತ ಭಟ್ ಗೋಸಾಡ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಭಜನಾ ಸಂಘದ ಸದಸ್ಯರು, ಮಾತೃ ಮಂಡಳಿಯ ಸದಸ್ಯೆಯರು ಹಾಗೂ ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವವನ್ನು ಸಾಂಗವಾಗಿ ನೆರವೇರಿಸಲು ಸಹಾಯ ಸಹಕಾರಗಳನ್ನು ನೀಡಿ ಶ್ರೀ ಮಹಿಷಮರ್ದಿನಿ ಅಮ್ಮನ ಕೃಪಾಕಟಾಕ್ಷಕ್ಕೆ ಪಾತ್ರರಾಗಿ ಬೇಕಾಗಿ ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


