ಕಾಸರಗೋಡು: ಜಿಲ್ಲಾ ಮಟ್ಟದ ಕೇರಳೋತ್ಸವ ಅಂಗವಾಗಿ ಕಲಾಮೇಳ ಡಿಸೆಂಬರ್ 21ಹಾಗೂ 22ರಂದು ಪಳ್ಳಿಕೆರೆ ಗ್ರಾಮ ಪಂಚಾಯಿತಿಯ ಪಾಕ್ಕಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗಲಿರುವುದಾಗಿ ಜಿಪಂ ಸ್ಥಾಯೀ ಸಮಿತಿ ಅಧ್ಯಕ್ಷ ಶಾನವಾಸ್ ಪಾದೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಒಟ್ಟು 54 ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ 2500ಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಳ್ಳುವರು.
21ರಂದು ಬೆಳಗ್ಗೆ 10ಕ್ಕೆ ವೇದಿಕೆ ಸ್ಪರ್ಧೆಗಳು ಆರಂಭಗೊಳ್ಳುವುದು. ಸಾಯಂಕಾಲ 4ಕ್ಕೆ ರಾಜ್ಯ ಕಂದಾಯ ಖಾತೆ ಸಚಿವ ಇ.ಚಂದ್ರಶೇಖರನ್ ಸಮಾರಂಭ ಉದ್ಘಾಟಿಸುವರು. ಜಿಪಂ ಅಧ್ಯಕ್ಷ ಎ.ಜಿ.ಸಿ ಬಶೀರ್ ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ಸಿ ಕಮರುದ್ದೀನ್, ಜಿಲ್ಲಾಧಿಕಾರಿ ಡಾ. ಡಿ.ಸಜಿತ್‍ಬಾಭು ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
22ರಂದು ಸಆಯಂಕಾಲ 6ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉದುಮ ಶಾಸಕ ಕೆ. ಕುಞÂರಾಮನ್ ಉದ್ಘಾಟಿಸುವರು.ಜಿಪಂ ಉಪಾಧ್ಯಕ್ಷೆ ಶಾಂತಮ್ಮ ಫಿಲಿಪ್ ಅಧ್ಯಕ್ಷತೆ ವಹಿಸುವರು.ಶಾಸಕರಾದ ಎನ್.ಎ ನೆಲ್ಲಿಕುನ್ನು, ಎಂ. ರಾಜಗೋಪಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.ಜಿಪಂ ಸ್ಥಾಯೀ ಸಮಿತಿ ಅಧ್ಯಕ್ಷ ಶಾನವಾಸ್ ಪಾದೂರ್ ಬಹುಮಾನ ವಿತರಿಸುವರು. ಕಾಸರಗೋಡು ನಗರಸಭಾ ಅಧ್ಯಕ್ಷೆ ಬೀಫಾತಿಮ್ಮ ಇಬ್ರಾಹಿಂ, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಎ.ಕೆ.ಎಂ ಅಶ್ರಫ್, ನೀಲೇಶ್ವರ ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ವಿ.ಪಿ ಜಾನಕಿ ಹಾಗೂ ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಸುದ್ದಿಗೊಷ್ಠಿಯಲ್ಲಿ ಜಿಪಂ ಕಾರ್ಯದರ್ಶಿ ನಂದಕುಮಾರ್, ಸ್ಥಾಯೀ ಸಮಿತಿ ಅಧ್ಯಕ್ಷೆ ಫರೀದಾ ಸಕೀರ್, ಜಿಪಂ ಸದಸ್ಯೆ ಇ.ಪದ್ಮಾವತೀ ಉಪಸ್ಥಿತರಿದ್ದರು.

