ಕಾಸರಗೊಡು: ಪೌರತ್ವ ತಿದ್ದುಪಡಿ ಕಾನೂನು ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ವರದಿಗಾಗಿ ತೆರಳಿದ್ದ ಕಾಸರಗೋಡಿನ ಮಾಧ್ಯಮ ಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಪ್ರಕರಣ ಹಾಗೂ ಪೌರತ್ವ ತಿದ್ದುಪಡಿ ಕಾನೂನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕಾಸರಗೋಡು ಸಹಿತ ಕೇರಳಾದ್ಯಂತ ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿತು.
ಕಾಸರಗೋಡು ಪ್ರೆಸ್‍ಕ್ಲಬ್ ವತಿಯಿಂದ ಹೊಸ ಬಸ್ ನಿಲ್ದಾಣದಿಂದ ಕಾಸರಗೋಡಿನ ಹಳೇಬಸ್ ನಿಲ್ದಾಣದ ಮುಖ್ಯ ಅಂಚೆ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಮುಖ್ಯ ಅಂಚೆ ಕಚೇರಿ ವಠಾರದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಪ್ರೆಸ್‍ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ ಉದ್ಘಾಟಿಸಿದರು. ಕಾರ್ಯದರ್ಶಿ ಕೆ.ವಿ ಪದ್ಮೇಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಸನ್ನಿ ಜೊಸೆಫ್, ಟಿ.ಎ ಶಾಫಿ, ಬಿನೋಯ್ ಮ್ಯಾಥ್ಯೂ ಮುಂತಾದವರು ಮಾತನಡಿದರು.
ಕೇರಳದ ಇತರ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಿತು. ಘಟನೆ ಖಂಡಿಸಿ ಪತ್ರಕರ್ತರು ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಮಾಧ್ಯಮ ಪ್ರತಿನಿಧಿಗಳನ್ನು ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.


