ಸಮರಸ ಚಿತ್ರ ಸುದ್ದಿ: ಕಾಸರಗೋಡು: ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್ ಅವರ ಸಂಸ್ಮರಣೆ ನಡೆಯಿತು.
ಕಾಸರಗೋಡು ಜಿಲ್ಲೆ ಐಎನ್‍ಟಿಯುಸಿ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯ ಆರ್.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಶಾಹುಲ್ ಹಮೀದ್ ಉದ್ಘಾಟಿಸಿದರು. ಸಭೆಯಲ್ಲಿ ಉಮೇಶ್ ಅಣಂಗೂರು, ಅಬೂಬಕ್ಕರ್ ತುರ್ತಿ, ಸಿಜಿ ಟೋನಿ, ಹರೀಂದ್ರನ್ ಮೊದಲಾದವರು ಸಂಸ್ಮರಣಾ ಭಾಷಣ ಮಾಡಿದರು.

