HEALTH TIPS

ಜಾಖರ್ಂಡ್ ನಲ್ಲಿ ಕಾಂಗ್ರೆಸ್, ಜೆಎಂಎಂಗೆ ಸ್ಪಷ್ಟ ಬಹುಮತ, ಸಿಎಂ ಹುದ್ದೆಗೇರಲು ಸೋರೆನ್ ಸಿದ್ಧತೆ

 
     ರಾಂಚಿ: ಜಾಖರ್ಂಡ್ ವಿಧಾನಸಭೆಗೆ ನಡೆದ ಐದು ಹಂತಗಳ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿವೆ.
   ಜಾಖರ್ಂಡ್ ನ 81 ಕ್ಷೇತ್ರಗಳ ಪೈಕಿ ಕಾಂಗ್ರೆಸ್, ಜೆಎಂಎ ಮೈತ್ರಿಕೂಟ 45 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ ಬಿಜೆಪಿ ಮೈತ್ರಿಕೂಟ 26 ಸ್ಥಾನಗಳನ್ನು ಪಡೆಯುವ ಮೂಲಕ ತೀವ್ರ ಮುಖಭಂಗಕ್ಕೆ ಈಡಾಗಿದೆ.ಉಳಿದಂತೆ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಎಜೆಎಸ್ ಯು ಪಕ್ಷ 3, ಜೆವಿಎಂ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇತರರು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.81 ಸದಸ್ಯ ಬಲದ ಜಾಖರ್ಂಡ್ ನಲ್ಲಿ ಸರ್ಕಾರ ರಚನೆಗೆ 41 ಸದಸ್ಯ ಬಲದ ಅಗತ್ಯವಿದೆ. ಹೀಗಾಗಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಅವರು ಜಾಖರ್ಂಡ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಭರ್ಜರಿ ಸಿದ್ಥತೆ ನಡೆಸಿದ್ದಾರೆ.
    2005 ಹಾಗೂ 2009 ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ನೀಡಿದ್ದ ಜಾಖರ್ಂಡ್ ಮತದಾರ 2014ರಲ್ಲಿ ಮೋದಿ ಅಲೆಗೆ ಅಸ್ತು ಎಂದಿದ್ದ. ಈ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟ ಜೈ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries