ಮುಳ್ಳೇರಿಯ: ಕುಂಟಾರು ಶ್ರೀ ಮಹಾವಿಷ್ಣುಮೂರ್ತಿ ಕ್ಷೇತ್ರ ಪರಿಸರದಲ್ಲಿ ನಿರ್ಮಾಣಗೊಳ್ಳಲಿರುವ ಮಂತ್ರಶಾಲೆಯ ಶಂಕುಸ್ಥಾಪನೆಯನ್ನು ಎಡನೀರು ಮಠದ ಪರಮಪೂಜ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ಜ.16ರಂದು ಬೆಳಿಗ್ಗೆ 9.47ಕ್ಕೆ ನೆರವೇರಿಸಲಿರುವರು.
ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀಪಾದಂಗಳವರು ಆಶೀರ್ವಚನ ನೀಡುವರು. ಶ್ರೀಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಪದ್ಮನಾಭ ಭಟ್ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರದ ಆಡಳಿತೆ ಮೊಕ್ತೇಸರ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ ರವೀಶ ತಂತ್ರಿ ಉಪಸ್ಥಿತರಿರುವರು.




