ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತಿ ಮಟ್ಟದ ಗಣಿತೋತ್ಸವ ಜ.17 ರಿಂದ 19 ರ ವರೆಗೆ ಕೊಡ್ಲಮೊಗರಿನ ಶ್ರೀ ವಾಣೀ ವಿಜಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
ವರ್ಕಾಡಿ ಗ್ರಾಮ ಪಂಚಾಯತಿ ಮಟ್ಟದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10 ಕ್ಕೆ ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಅಬ್ದುಲ್ ಮಜೀದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಭ್ಯಾಸ ಹಾಗು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಜಸಿಂತಾ ಡಿ'ಸೋಜಾ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ರೆಹಮತ್ ರಜಾಕ್, ವರ್ಕಾಡಿ ಗ್ರಾಮ ಪಂಚಾಯತಿ ಸದಸ್ಯ ಗೋಪಾಲಕೃಷ್ಣ ಪಜ್ವ ಭಾಗವಹಿಸುವರು.
ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ., ಮಂಜೇಶ್ವರ ಬ್ಲಾಕ್ ನಿರೂಪಣಾಧಿಕಾರಿ ಗುರುಪ್ರಸಾದ್ ರೈ ಹಾಗು ಇತರ ಗಣ್ಯರು ಕಾರ್ಯಕ್ರಮದಲ್ಲಿ ಶುಭಾಸಂಶನೆಗೈಯ್ಯುವರು. ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಶಿಬಿರ ಚಟುವಟಿಕೆಗಳು ನಡೆಯಲಿದೆ.




