ಮಂಜೇಶ್ವರ: ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಜನವರಿ 19 ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.
ಬೆಳಗ್ಗೆ 10 ಕ್ಕೆ ಶಾಲಾ ನಿರ್ವಾಹಕ ಸಮಿತಿಯ ಅಧ್ಯಕ್ಷೆ ಅಲೀಮ ಧ್ವಜಾರೋಹಣಗೈಯ್ಯುವರು. 01 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಂಜ ಗ್ರಾ.ಪಂ. ಸದಸ್ಯ ಶಾಂತಾರಾಮ ಶೆಟ್ಟಿ ವಹಿಸಲಿದ್ದು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸುವರು. ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ ಕೆ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ಮಂಜೇಶ್ವರ, ಕ್ಷೇತ್ರ ನಿರೂಪಣಾಧಿಕಾರಿ ಗುರುಪ್ರಸಾದ್ ರೈ, ನಿವೃತ್ತ ಉಪಜಿಲ್ಲಾಧಿಕಾರಿ ಎಂ.ಜಿ ನಾರಾಯಾಣ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಶಿವ ಶೆಟ್ಟಿ, ಮಜಿಬೈಲು ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ನಾವಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷೆ ನಿರ್ಮಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ, ಹಳೆ ವಿದ್ಯಾರ್ಥಿ ಹಾಗೂ ಊರ ವಿದ್ಯಾಭಿಮಾನಿಗಳಿಗೆ ನಡೆಸಿದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಶಾಲಾ ಹಳೆ ವಿದ್ಯಾರ್ಥಿ ಸಾಧಕರನ್ನು ಸಮ್ಮಾನಿಸಲಾಗುವುದು. ನಂತರ ಶಾಲಾ ವಿದ್ಯಾರ್ಥಿ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿ ಕಾರ್ಯಕ್ರಮ ನಡೆಯಲಿರುವುದು.

