ನವದೆಹಲಿ: ಜನವರಿ ಕೊನೆ ವಾರದಲ್ಲಿ ಸಂಸತ್‍ನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಸಂಸದರು ಕೇಳಬಹುದಾದ ಪ್ರಶ್ನೆಗಳ ಕುರಿತು ಸಿದ್ಧತೆ ನಡೆಸುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸುತ್ತಿದ್ದಾರೆ.
ಜನವರಿ ಕೊನೆ ವಾರದಲ್ಲಿ ಸಂಸತ್ ಬಜೆಟ್ ಅಧಿವೇಶನ ಆರಂಭವಾಗುವ ಸಾಧ್ಯತೆ ಇದ್ದು, ಈ ಕುರಿತು ಸಚಿವಾಲಯದ ವಿವಾದ ಇಲಾಖೆಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಬಜೆಟ್ ಮಂಡಿಸುವ ಸಾಧ್ಯತೆ ಇದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವ ಸಂಪುಟದ ಸಂಸದೀಯ ಸಮಿತಿಯು ಬಜೆಟ್ ಅಧಿವೇಶನದ ದಿನಾಂಕ ನಿಗದಿಪಡಿಸಿದ ಬಳಿಕ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಲಿದೆ.ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಆರ್ಥಿಕ ಸಮೀಕ್ಷೆಯನ್ನು ಮಂಡಿಸುವ ಸಂಭವ ಇದೆ.
ಬಜೆಟ್ ಅಧಿವೇಶನ ಏಪ್ರಿಲ್ ವರೆಗೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.