ಬದಿಯಡ್ಕ: ಕುಕ್ಕಂಗೋಡ್ಲು ಶ್ರೀಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ಜ. 24 ಶುಕ್ರವಾರದಂದು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹವನ ಮತ್ತು ರಾತ್ರಿ 8 ಗಂಟೆಗೆ ದುರ್ಗಾಪೂಜೆ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಕಾರ್ತಿಕ ಪೂಜೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಮಾರ್ಚ್ 20 ರಿಂದ 28ರ ತನಕ ಜರಗಲಿರುವ ಬ್ರಹ್ಮಕಲಶ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಲಿದೆ. ನಂತರ ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಜ.24ರಂದು ಕುಕ್ಕಂಗೋಡ್ಲು ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
0
ಜನವರಿ 20, 2020