ಕಾಸರಗೋಡು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಕಾಸರಗೋಡು ಇದರ ಆಶ್ರಯದಲ್ಲಿ ಜ.30 ಮತ್ತು 31 ರಂದು ಪಾರೆಕಟ್ಟೆಯ `ಕನ್ನಡ ಗ್ರಾಮ'ದಲ್ಲಿ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ ಮತ್ತು ಕೇರಳ-ಕರ್ನಾಟಕ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಜ.30 ರಂದು ಬೆಳಗ್ಗೆ 9 ಕ್ಕೆ ಸಮ್ಮೇಳಾಧ್ಯಕ್ಷರೊಂದಿಗೆ ಕನ್ನಡ ಭುವನೇಶ್ವರಿಯ ಸಾಂಸ್ಕøತಿಕ ಮೆರವಣಿಗೆಯನ್ನು ಮಧೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲತಿ ಸುರೇಶ್ ಉದ್ಘಾಟಿಸುವರು. ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲಾ ಪ್ರಬಂಧಕ ಕೆ.ಜಿ.ಶ್ಯಾನುಭೋಗ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಿವಾಕರ ಆಚಾರ್ಯ, ಕೆ.ಮಾಧವ ಮಾಸ್ತರ್, ಶ್ರೀಧರ ಮಣಿಯಾಣಿ, ಶ್ರೀಹರಿ ಮಾಸ್ತರ್ ಭಾಗವಹಿಸುವರು. 9.30 ಕ್ಕೆ ಕನ್ನಡ ಭುವನೇಶ್ವರಿಯ ಮಂಟಪ ಉದ್ಘಾಟನೆ, ಕೆ.ಶಂಕರ್ ಅವರಿಂದ ರಾಷ್ಟ್ರ ಧ್ವಜಾರೋಹಣ, ಶಿವರಾಮ ಕಾಸರಗೋಡು ಅವರಿಂದ ಕನ್ನಡ ಧ್ವಜಾರೋಹಣ ನಡೆಯಲಿದೆ.
ಆ ಬಳಿಕ ಸಮ್ಮೇಳನ ಉದ್ಘಾಟನಾ ಸಮಾರಂಭ ನಡೆಯುವುದು. ಕರ್ನಾಟಕ ಬಂದರು-ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಸರ್ವಾಧ್ಯಕ್ಷ ಗಣೇಶ್ ಕಾಸರಗೋಡು ಅವರಿಂದ ಸಮ್ಮೇಳನಾಧ್ಯಕ್ಷರ ನುಡಿ, ಹಿರಿಯ ನ್ಯಾಯವಾದಿ ಪ್ರಕಾಶ್ ಎಸ್.ಉಡಿಕೇರಿ ಅಧ್ಯಕ್ಷತೆ ವಹಿಸುವರು. ಸಾಹಿತಿ ಚಟ್ನಳ್ಳಿ ಮಹೇಶ್ ಪ್ರಧಾನ ಭಾಷಣ ಮಾಡುವರು. ಶಾಸಕ ಎನ್.ಎ.ನೆಲ್ಲಿಕುನ್ನು, ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಧ್ಯಾಹ್ನ 2 ರಿಂದ ನೃತ್ಯ ಕಲಾ ಪ್ರತಿಭೋತ್ಸವ ಪ್ರದರ್ಶನ, 3.30 ರಿಂದ ರಾಷ್ಟ್ರೀಯ ವಿಚಾರಗೋಷ್ಠಿ, ಸಂಜೆ 6 ರಿಂದ ಸಾಂಸ್ಕøತಿಕ ವೈವಿಧ್ಯ ನಡೆಯಲಿದೆ.
ಜ.31 ರಂದು ಬೆಳಗ್ಗೆ 10 ರಿಂದ ರಾಷ್ಟ್ರೀಯ ವಿಚಾರಗೋಷ್ಠಿ, ಮಧ್ಯಾಹ್ನ 12.30 ರಿಂದ ಅಂತಾರಾಜ್ಯ ಮಟ್ಟದ ಕಾವ್ಯ ಪ್ರಸ್ಥಾನ, 2 ರಿಂದ ಅಂತಾರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ, 3 ರಿಂದ ಅಂತಾರಾಜ್ಯ ಮಟ್ಟದ ಮಕ್ಕಳ ಕವಿಗೋಷ್ಠಿ, ಸಂಜೆ 3.30 ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಕರ್ನಾಟಕ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ.ರವಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸುವರು. ಡಾ.ರಾಜೇಶ್ ಬೆಜ್ಜಂಗಳ ಸಮಾರೋಪ ಭಾಷಣ ಮಾಡುವರು. ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ 6 ರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರಗಲಿದೆ.


