ಕಾಸರಗೋಡು: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣಗೊಂಡಿರುವ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣಕ್ಕೆ ಸಿದ್ಧವಾಗಿದೆ. 12 ಅಡಿ ಎತ್ತರದ ತಾಮ್ರದ ಪ್ರತಿಮೆ ಇದಾಗಿದೆ. 22 ಲಕ್ಷ ರೂ. ವೆಚ್ಚದಲ್ಲಿ ಶಿಲ್ಪಿ ಉಣ್ಣಿ ಕಾನಾಯಿ ಮೂರು ತಿಂಗಳ ಅವಧಿಯಲ್ಲಿ ಈ ಪ್ರತಿಮೆ ನಿರ್ಮಿಸಿದ್ದಾರೆ. ಪಂಚಾಯತ್ ಗಳ ಸ್ವಂತ ನಿಧಿಯಿಂದ ಕೊಡುಗೆ ಪಡೆದು ಈ ನಿರ್ಮಾಣ ನಡೆಸಲಾಗಿದೆ.
ಜ.30ರಂದು ಅನಾವರಣ :
ಜಿಲ್ಲಾಧಿಕಾರಿ ಕಚೇರಿ ಆವರಣದ ಮಹಾತ್ಮ ಗಾಂಧಿ ಅವರ ತಾಮ್ರದ ಪ್ರತಿಮೆಯ ಅನಾವರಣ ಜ.30ರಂದು ನಡೆಯಲಿದೆ. ಕಂದಾಯ ಸಚಿವ ಇ.ಚಂದ್ರಶೇಖರನ್ ಅನಾವರಣ ನಡೆಸುವರು. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿರುವರು. ಶಾಸಕರಾದ ಕೆ.ಕುಂಞÂರಾಮನ್, ಎಂ.ರಾಜಗೋಪಾಲ್, ಎಂ.ಸಿ.ಕಮರುದ್ದೀನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಷಾಹಿನಾ ಸಲೀಂ ಮೊದಲಾದವರು ಉಪಸ್ಥಿತರಿರುವರು. ಶಿಲ್ಪಿ ಉಣ್ಣಿ ಕಾನಾಯಿ ಅವರನ್ನು ಅಭಿನಂದಿಸಲಾಗುವುದು. ಮಾಜಿ ಶಾಸಕ ಕೆ.ಪಿ.ಕುಂಞÂಕಣ್ಣನ್ ವರದಿ ವಾಚಿಸುವರು.




