ಪೆರ್ಲ:ಸ್ವರ್ಗದ ಸ್ವಾಮಿ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಗೀತಾಕುಮಾರಿ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವ ತಿಳಿಸಿದರು. 7ನೇ ತರಗತಿ ವಿದ್ಯಾರ್ಥಿನಿ ಇಂಚರಾ ಗಣರಾಜ್ಯೋತ್ಸವದ ಕುರಿತು ಪ್ರಬಂಧ ಮಂಡಿಸಿದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಅಧ್ಯಾಪಕ, ಸಿಬ್ಬಂದಿಗಳು ಉಪಸ್ಥಿತರಿದ್ದರು.