HEALTH TIPS

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ


           ಕಲಬುರಗಿ: ಕಲಬುರಗಿಯಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಅನಾವರಣಗೊಂಡಿದೆ.
         ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಬಿ ಶರತ್ ಅವರು ಭಾನುವಾರ ಲಾಂಛನ ಬಿಡುಗಡೆ ಮಾಡಿದರು. 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಕಲ್ಯಾಣ ಕರ್ನಾಟಕದ ಐತಿಹಾಸಿಕ ಪರಂಪರೆಯನ್ನು ಲಾಂಛನ ಬಿಂಬಿಸುವಂತಿದ್ದು, ಕವಿರಾಜಮಾರ್ಗ ಗ್ರಂಥವನ್ನು ಪ್ರಧಾನವಾಗಿ ಎದ್ದುಕಾಣುವಂತೆ ಮಾಡಲಾಗಿದೆ. ಜೊತೆಗೆ ಕಲಬುರಗಿ ಐತಿಹಾಸಿಕ ಸ್ಥಳಗಳಾದ ಶರಣ ಬಸವ ದೇವಸ್ಥಾನ, ಬೌದ್ದ ಸ್ತೂಪವನ್ನೂ ಒಳಗೊಂಡು ಆಕರ್ಷಣಿಯವಾಗಿ ಮೂಡಿ ಬಂದಿದೆ.
         ಇದೇ ವೇಳೆ ಜಿಲ್ಲಾಧಿಕಾರಿಯವರು ಸಮ್ಮೇಳನದ ಸಿದ್ದತೆಗಳ ಬಗ್ಗೆ ವಿವರಿಸಿದರು. ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5, 6 ಹಾಗೂ 7 ರಂದು 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ 16 ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಡಿಸೆಂಬರ್‍ನಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries