ಸಮರಸ ಚಿತ್ರ ಸುದ್ದಿ: ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲಾ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಳಿಗೆ ಸರ್ಕಾರದ ವತಿಯಿಂದ ಉಚಿತ ಮೇಜು ಹಾಗು ಕುರ್ಚಿಗಳನ್ನು ವಿತರಿಸುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಂಜ ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ ಕೊಮ್ಮಂಗಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್, ಶಾಲಾ ಆಡಳಿತ ಸಲಹೆಗಾರ ಶ್ರೀಧರ್ ರಾವ್ ಆರ್.ಎಂ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಸುಧಾಕರ ವಿ ಉಪಸ್ಥಿತರಿದ್ದರು. ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ನಿರೂಪಿಸಿದರು. ಅಧ್ಯಾಪಕ ಮಹಾಬಲೇಶ ಭಟ್ ವಂದಿಸಿದರು.
ಉಚಿತ ಮೇಜು-ಕುರ್ಚಿಗಳ ವಿತರಣೆ
0
ಜನವರಿ 06, 2020